
ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಬುಲಾವ್ ನೀಡಿದ್ದಾರೆ.
ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದು, ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.
ದೆಹಲಿಗೆ ಬರುವಂತೆ ಸೋನಿಯಾಗಾಂಧಿ ಆಹ್ವಾನ ನೀಡಿದ್ದು, ಟಿಕೆಟ್ ಹಂಚಿಕೆ, ಕೆಪಿಸಿಸಿ ಪುನಾರಚನೆ ಮತ್ತು ಪಕ್ಷ ಸಂಘಟನೆ ಕುರಿತಾಗಿ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.