ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಎತ್ತಿ ಹಿಡಿದಿದೆ. ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆಯಾಗುತ್ತಿದ್ದಂತೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರರಾದ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಾಹಂ ಜನಪ್ರತಿನಿಧಿಗಳ ಕೊರ್ಟ್ ನಲ್ಲಿಯೂ ಖಾಸಗಿ ದೂರು ಸಲ್ಲಿಸಿದ್ದಾರೆ. ನಾಳೆ ವಿಚಾರಣೆ ನಡೆಯುವ ಸಾದ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ಪ್ರಕಟಿಸಿರುವ ತೀರ್ಪಿನ ಪ್ರತಿ ಹಿಡಿದು ದೂರುದಾರರು ಇದೀಗ ಜನಪ್ರತಿನಿಧಿಗಳ ಕೋರ್ಟ್ ಗೆ ಸಲ್ಲಿಸಿದ್ದು, ಕೋರ್ಟ್ ಈ ತೀರ್ಪನ್ನು ಪರಿಗಣಿಸುವ ಸಾಧ್ಯತೆ ದಟ್ಟವಾಗಿದೆ.
ವಿಚಾರಣೆ ವೇಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿದರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ.