ಕೊಡವರು ಬಿಫ್ ತಿನ್ನುತ್ತಾರೆ ಎಂದು ಹೇಳಿ ಬಳಿಕ ಸ್ಪಷ್ಟನೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೊನ್ನೆ ಕೊಡವರು ಬೀಫ್ ತಿನ್ನುತ್ತಾರೆ ಎಂದು ಸುಳ್ಳನ್ನು ಹೇಳಿ ನಂತರ ವಿಷಾದ ವ್ಯಕ್ತಪಡಿಸಿದ್ದ ರಾಜ್ಯದ ಪ್ರತಿಪಕ್ಷದ ನಾಯಕರು ಇಂದು ಶಿಕ್ಷಣ ಸಚಿವರು ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಶಾಮೀಲಾಗಿದ್ದಾರೆ ಎಂದು ಹೇಳಿದ್ದಾರೆ. ಇದೊಂದು ಅಪ್ಪಟ ಅಸತ್ಯ. ಅವರಿಗೆ ಸತ್ಯ ಹೇಳುವ ಬುದ್ಧಿ ಬರಲಿ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
https://www.facebook.com/nimmasuresh/posts/4114351441925503