alex Certify BIG NEWS: ಮಕ್ಕಳಿಗೆ ಸಂವಿಧಾನದ ಪಾಠ ಮಾಡಿದ ಸಿಎಂ: ಬಸವಣ್ಣ, ಕುವೆಂಪು ಬಗ್ಗೆಯೂ ಅರಿವು ಮೂಡಿಸಿದ ಸಿದ್ದರಾಮಯ್ಯ ಮೇಷ್ಟ್ರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಕ್ಕಳಿಗೆ ಸಂವಿಧಾನದ ಪಾಠ ಮಾಡಿದ ಸಿಎಂ: ಬಸವಣ್ಣ, ಕುವೆಂಪು ಬಗ್ಗೆಯೂ ಅರಿವು ಮೂಡಿಸಿದ ಸಿದ್ದರಾಮಯ್ಯ ಮೇಷ್ಟ್ರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಒಂದು ಗಂಟೆ ಕಾಲ ಮಕ್ಕಳಿಗೆ ಸಂವಿಧಾನದ ಬಗ್ಗೆ ಮೇಷ್ಟ್ರಾಗಿ ಪಾಠ ಮಾಡಿ ಗಮನ ಸೆಳೆದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನದ ಬಗ್ಗೆ, ಬಸವಣ್ಣ, ಕುವೆಂಪ್ಪು ಅವರ ಬಗ್ಗೆ ಪಾಠ ಮಾಡಿದರು.

ಸಿಎಂ ಪಾಠವನ್ನು ಮಕ್ಕಳು ತದೇಕಚಿತ್ತದಿಂದ ಆಲಿಸಿ, ಹಲವಾರು ಪ್ರಶ್ನೆಗಳ ಮೂಲಕ ಸಂವಿಧಾನದ ಬಗ್ಗೆ ತಿಳಿದುಕೊಂಡರು.

ಇದೇ ವೇಳೆ ಸಂವಿಧಾನ ಓದು ಅಭಿಯಾನದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಿಎಂ ಬಹುಮಾನ ವಿತರಿಸಿದರು.

ಸಂವಿಧಾನದ ಶ್ರೇಷ್ಠತೆ ಮತ್ತು ವಿಫಲತೆ ಅದು ಯಾರ ಕೈಯಲ್ಲಿದೆ ಎನ್ನುವವರ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಮತ್ತು ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕುವೆಂಪು ಅವರ ಮಾತುಗಳನ್ನು ಸಿಎಂ ಉಲ್ಲೇಖಿಸಿದರು.

ಸಂವಿಧಾನದ ಪೀಠಿಕೆಯಲ್ಲೇ ಇಡೀ ಸಂವಿಧಾನದ ಸಾರಾಂಶ ಇದೆ. ಜಾತ್ಯತೀತತೆ, ಸಾಮಾಜಿಕ ನ್ಯಾಯ ಎರಡೂ ಮೂಲ ಸಂವಿಧನದಲ್ಲಿ ಇರಲಿಲ್ಲ. ಬಳಿಕ ಸೇರ್ಪಡೆಯಾಯಿತು. ಇದನ್ನು ತೆಗೆಯಬೇಕು ಎಂದು ಕೆಲವರು ಸುಪ್ರೀಂಕೋರ್ಟ್ ಗೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಿತು ಎಂದರು.

ಭಾರತ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮದವರಿಗೆ ಸಮಾನವಾಗಿ ನಡೆಸಿಕೊಳ್ಳುವುದು ನಮ್ಮ ದೇಶದ ಗುಣ. ಇದೇ ಸಂವಿಧಾನದ ಮೌಲ್ಯ ಎಂದರು.

ನಮ್ಮ ಸಂವಿಧಾನದ ಹಕ್ಕುಗಳು ಏನೇನು ಅಂತ ಗೊತ್ತಿದ್ದರೆ ಮಾತ್ರ ಅವನ್ನು ಪಡೆದುಕೊಳ್ಳಬಹುದು. ಏಳು ಸ್ವಾತಂತ್ರ್ಯಗಳನ್ನು ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ನೀಡಿದೆ. ಇದನ್ನೆಲ್ಲಾ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದರು. ಹೀಗಾಗಿ ಸಂವಿಧಾನ ಓದು ಅಭಿಯಾನವನ್ನು ರಾಜ್ಯಾದ್ಯಂತ ಆರಂಭಿಸಲಾಯಿತು ಎಂದರು. ಸಂವಿಧಾನದ ಧ್ಯೇಯೋದ್ದೇಶ ಮತ್ತು ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ಕರೆ ನೀಡಿದರು.

ಜಾತಿ, ಧರ್ಮದ ಹೆಸರಲ್ಲಿ ಒಬ್ಬರನ್ನು ಅಗೌರವದಿಂದ ಕಾಣುವುದು, ಮತ್ತೊಬ್ಬರು ಸಂವಿಧನೇತರ ಗೌರವ ನಿರೀಕ್ಷಿಸುವುದು ತಪ್ಪು ಎಂದರು. ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ಮತ್ತು ಕರ್ಮಸಿದ್ದಾಂತವನ್ನು ಧಿಕ್ಕರಿಸಿದ್ದಾರೆ. ಆದರೆ, ಇವತ್ತಿಗೂ ಇದು ಪೂರ್ತಿ ಹೋಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಂವಿಧಾನದಲ್ಲಿ ಕಂದಾಚಾರಗಳಿಗೆ ಅವಕಾಶವಿಲ್ಲ. ಒಂದು ಜಾತಿ, ಒಂದು ಧರ್ಮಕ್ಕೆ ಮಾತ್ರ ಈ ದೇಶ ಸೀಮಿತವಲ್ಲ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...