ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿ.ಕೆ. ಶಿವಕುಮಾರ್ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಆರಂಭದ ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ ಹಾಗೂ ನಂತರದ ಎರಡುವರೆ ವರ್ಷ ಡಿ.ಕೆ. ಶಿವಕುಮಾರ್ ಸಿಎಂ ಎಂಬ ನಿರ್ಧಾರಕ್ಕೆ ಬಂದಿದೆ.
ಈ ಬೆಳವಣಿಗೆ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಒಂದೇ ಕಾರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಇಬ್ಬರು ನಾಯಕರ ಕೈ ಎತ್ತಿ ಯಾವುದೇ ಅಸಮಾಧಾನವಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರು ನಾಯಕರು ಸಂತೋಷದಿಂದಲೇ ಖರ್ಗೆ ಜೊತೆ ಚರ್ಚೆ ನಡೆಸಿದ್ದಾರೆ.