alex Certify BIG NEWS: ಖರ್ಗೆ ನಿವಾಸದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖರ್ಗೆ ನಿವಾಸದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್

ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿ.ಕೆ. ಶಿವಕುಮಾರ್ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಆರಂಭದ ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ ಹಾಗೂ ನಂತರದ ಎರಡುವರೆ ವರ್ಷ ಡಿ.ಕೆ. ಶಿವಕುಮಾರ್ ಸಿಎಂ ಎಂಬ ನಿರ್ಧಾರಕ್ಕೆ ಬಂದಿದೆ.

ಈ ಬೆಳವಣಿಗೆ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಒಂದೇ ಕಾರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಇಬ್ಬರು ನಾಯಕರ ಕೈ ಎತ್ತಿ ಯಾವುದೇ ಅಸಮಾಧಾನವಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರು ನಾಯಕರು ಸಂತೋಷದಿಂದಲೇ ಖರ್ಗೆ ಜೊತೆ ಚರ್ಚೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...