ಗ್ರಾಮೀಣ ಪ್ರದೇಶದ ಜನರು ಎಂದೂ ಕಾಂಗ್ರೆಸ್ ಪಕ್ಷವನ್ನು ಕೈ ಬಿಟ್ಟಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ಬಂದ ದಿನದಿಂದ ಕಾಂಗ್ರೆಸ್ ಪಕ್ಷವನ್ನು ಕೈಬಿಟ್ಟಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿರುವ ಅವರು, ರೈತರ ಪರವಾಗಿರುವ ಕಾಂಗ್ರೆಸ್ ನೀತಿ ಮತ್ತು ಕಾರ್ಯಕ್ರಮಗಳೇ ಇದಕ್ಕೆ ಕಾರಣವೆಂದು ಹೇಳಿದ್ದಾರೆ.
ಗೆಲುವಿನ ಪರಂಪರೆ ಈ ಬಾರಿಯೂ ಮುಂದುವರೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇದು ಸತ್ವಪರೀಕ್ಷೆಯ ಕಾಲವಾಗಿದೆ. ಮತದಾರರ ವಿಶ್ವಾಸ ಗೆಲ್ಲಲಾಗದ ಬಿಜೆಪಿಯವರಿಂದ ಹಲವೆಡೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಆಸೆ, ಆಮಿಷ ಮತ್ತು ಬೆದರಿಕೆ ಮೂಲಕ ಸೆಳೆಯುವ ಪ್ರಯತ್ನ ನಡೆಸಲಾಗಿದೆ. ಈ ಬಗ್ಗೆ ದೂರುಗಳಿದ್ದು ಇಂತಹ ಕೃತ್ಯಗಳು ಖಂಡನೀಯ ಎಂದು ಅವರು ಹೇಳಿದ್ದಾರೆ.