ಲಸಿಕೆ ಪಡೆಯುವುದನ್ನು ಪ್ರೋತ್ಸಾಹಿಸ ಬೇಕಾದ ಕೇಂದ್ರ ಬಿಜೆಪಿ ಸರ್ಕಾರ ಅದರ ಬೆಲೆ ಏರಿಕೆ ಮಾಡಿ ಜನತೆ ಲಸಿಕೆ ಪಡೆಯದಂತೆ ಮಾಡಲು ಹೊರಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಪ್ರಧಾನಿ ಮೋದಿ ಅವರೇ ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ. ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಒತ್ತಾಯಿಸಿದ್ದಾರೆ.
ಔಷಧ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಪ್ರಧಾನಿಯವರನ್ನು ಬೇಡುತ್ತಿರುವ ಮುಖ್ಯಮಂತ್ರಿಯವರನ್ನು ಕಂಡಾಗ ಕನಿಕರ ಮೂಡುತ್ತಿದೆ. ರಾಜ್ಯದ 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕುಳಿತಿದ್ದಾರೆ. ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಹೇಳಿದ್ದಾರೆ.