
ಮೈಸೂರು: ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾ ಮತ್ತು ಕೋಲಾರದಲ್ಲಿ ಸ್ಪರ್ಧಿಸಲು ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ವರಿಷ್ಠರು ಕೋಲಾರ ಬೇಡ, ವರುಣಾದಲ್ಲಿ ಸ್ಪರ್ಧಿಸಿ ಎಂದು ಹೇಳಿದ್ದರು. ಕೋಲಾರದಿಂದ ಹಿಂದೆ ಸರಿದರೆ ಹಿನ್ನಡೆ ಆಗುತ್ತೆ ಎಂದು ಹೇಳುತ್ತಿದ್ದಾರೆ. ಇವತ್ತಿನ ಸ್ಥಿತಿಯಲ್ಲಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಬಿಡುವಂತಿಲ್ಲ. ಹೈಕಮಾಂಡ್ ಸೂಚನೆಯಂತೆ ವರುಣಾ ಕ್ಷೇತ್ರವನ್ನು ಬಿಡಲು ಆಗಲ್ಲ ಎಂದು ಹೇಳಿದ್ದಾರೆ.
ವರುಣಾದಲ್ಲಿ ಮಾತ್ರ ಸ್ಪರ್ಧಿಸಿ ಎಂದು ನಾನು ಸಲಹೆ ಕೊಟ್ಟಿದ್ದೆ. ಎಲ್ಲೇ ಸ್ಪರ್ಧಿಸಿದರೂ ವೈರಿಗಳು ಒಂದಾಗಿ ಸೋಲಿಸಲು ಯತ್ನಿಸುತ್ತಾರೆ. ಅವರ ವಿರುದ್ಧ ನೀರಿನಂತೆ ಹಣವನ್ನು ಖರ್ಚು ಮಾಡುತ್ತಾರೆ ಎಂದು ದೂರಿದ್ದಾರೆ.