ಮೈಸೂರು: ವಿಧಾನಸಭಾ ಚುನಾವಣೆ ವೇಳೆ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತನ್ನ ತಂದೆಗಾಗಿ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಆದರೆ ಕ್ಷೇತ್ರ ತ್ಯಾಗ ಮಾಡಿದ್ದ ಯತೀಂದ್ರ ಸಿದ್ದರಾಮಯ್ಯ ಅವರ ಮುಂದಿನ ರಾಜಕೀಯ ನಡೆ ಏನಿರಬಹುದು ಎಂಬ ಕುತೂಹಲ ಇಂದಿನವರೆಗೂ ಎಲ್ಲರಲ್ಲೂ ಪ್ರಶ್ನೆಯಾಗಿಯೇ ಇದೆ. ಇದೀಗ ಪುತ್ರನ ರಾಜಕೀಯ ಭವಿಷ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದರಾಮಯ್ಯ, ಯತೀಂದ್ರನನ್ನು ಎಂಎಲ್ ಸಿ ಮಾಡುವುದಾಗಿ ವರಿಷ್ಠರು ಭರವಸೆ ನೀಡಿದ್ದರು ಎಂದಿದ್ದಾರೆ.
ನಾನು ಕೋಲಾರದಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೆ. ಆದರೆ ಇಲ್ಲ ನೀವು ವರುಣಾದಿಂದ ಸ್ಪರ್ಧಿಸಿ ಎಂದು ಹೇಳಿದರು. ಯತೀಂದ್ರ ಕ್ಷೇತ್ರ ಬಿಟ್ಟುಕೊಡಿ ಎಂದಿದ್ದರು. ವರಿಷ್ಠರ ಮಾತಿಗೆ ತಲೆಬಾಗಿ ಯತೀಂದ್ರ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಯತೀಂದ್ರನನ್ನು ಎಂಎಲ್ ಸಿ ಮಾಡುವುದಾಗಿ ವರಿಷ್ಠರು ಹೇಳಿದ್ದರು. ನೋಡುಬೇಕು ಏನು ಮಾಡುತ್ತಾರೆ ಎಂದು ಹೇಳಿದರು.