BIG NEWS: ಶಾಮನೂರು ಶಿವಶಂಕರಪ್ಪ ಹೇಳಿಕೆ ಬೆನ್ನಲ್ಲೇ ಸಿಎಂ ಅಲರ್ಟ್; ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯಿತ ಅಧಿಕಾರಿಗಳಿಗೆ ಅನ್ಯಾಯವಾಗಿದೆ. ಸಮುದಾಯದವರನ್ನು ಮೂಲೆ ಗುಂಪು ಮಾಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲರ್ಟ್ ಆಗಿದ್ದಾರೆ.

ಸ್ವಪಕ್ಷದ ಸರ್ಕಾರದ ವಿರುದ್ಧವೇ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅಸಮಾಧಾನ ಹೊರ ಹಾಕಿದ್ದು, ಇದರಿಂದ ಪಕ್ಷದಲ್ಲಿ ಒಂದಿಷ್ಟು ಗೊಂದಲ ಸೃಷ್ಟಿಯಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಚಿವರು, ಶಾಸಕರಿಗಾಗಿ ಔತಣಕೂಟ ಏರ್ಪಡಿಸಿದ್ದಾರೆ.

ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಸಚಿವರು, ಶಾಸಕರಿಗಾಗಿ ಡಿನ್ನರ್ ಏರ್ಪಾಟು ಮಾಡಿದ್ದು, ಸಿಎಂ ಸಿದ್ದರಾಮಯ್ಯ ನಡೆ ತೀವ್ರ ಕುತೂಹಲ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read