BIG NEWS: ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರ ಆಕ್ರೋಶ

ಬೆಳಗಾವಿ: ದೇಶದ ಸಂಪತ್ತನ್ನು ಮುಸ್ಲಿಂರಿಗೆ ಹಂಚುತ್ತೇನೆ, ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಟಿಪ್ಪು ಅಂದ್ರೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಹಳ ಪ್ರೀತಿ. ಮುಖ್ಯಮಂತ್ರಿಗಳು ಆಡಿದ ಮಾತು ದೇಶ ಹಾಗೂ ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಈ ಹಿಂದೆ ಟಿಪ್ಪು ಮೇಲೆ ಅತಿ ಪ್ರೀತಿ ತೋರಿ ಏನಾಯಿತು. ಹಿಂದೂಗಳನ್ನು ಎರಡನೆ ದರ್ಜೆ ಪ್ರಜೆಗಳ ರೀತಿ ನೋಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಅಶ್ವತ್ಥನಾರಯಣ ಪ್ರತಿಕ್ರಿಯಿಸಿ, ದೊಡ್ಡ ಕೋಮುವಾದಿ ಅಂದರೆ ಕಾಂಗ್ರೆಸ್. ಸಿದ್ದರಾಮಯ್ಯ ದೊಡ್ಡ ಕೋಮುವಾದಿ. ಸುಖದಲ್ಲಿ ತೇಲುತ್ತಿರುವ ವ್ಯಕ್ತಿ ಅಂದರೆ ಸಿದ್ದರಾಮಯ್ಯ. ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರು ಎನ್ನುವುದನ್ನು ಮೊದಲು ಬಿಡಬೇಕು. ರಾಜಕೀಯಕ್ಕಾಗಿ ಕೇವಲ ವೋಟಿಗಾಗಿ ಈ ರೀತಿ ವಿಶೇಷ ಹೇಳಿಕೆಗಳು ಸೂಕ್ತವಲ್ಲ ಎಂದು ಕಿಡಿಕಾರಿದ್ದಾರೆ.

ಸಮಾಜಕ್ಕೆ ಸಮಸ್ಯೆಯಾಗಿ ಕಾಡುತ್ತಿದೆ ಎಂದರೆ ಅದು ಕಾಂಗ್ರೆಸ್ ಮಾತ್ರ ಎಂದು ಅಶ್ವತ್ಥನಾರಾಯಣ ಗುಡುಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read