alex Certify BIG NEWS: ಸಿಎಸ್ ಆರ್ ಶಾಲೆಯ ಪಟ್ಟಿ ಬಿಡುಗಡೆ ಮಾಡುವ ಮೂಲಕ ಮಾಜಿ ಸಿಎಂ HDKಗೆ ತಿರುಗೇಟು ನೀಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಸ್ ಆರ್ ಶಾಲೆಯ ಪಟ್ಟಿ ಬಿಡುಗಡೆ ಮಾಡುವ ಮೂಲಕ ಮಾಜಿ ಸಿಎಂ HDKಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: “ತಾ ಕಳ್ಳ ಇತರರ ನಂಬ’’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ. ಡಾ.ಯತೀಂದ್ರ ಅವರ ಜೊತೆಗಿನ ಫೋನ್ ಸಂಭಾಷಣೆಯ ಹಿನ್ನೆಲೆಯನ್ನು ಸ್ಪಷ್ಟಪಡಿಸಿದ ನಂತರವೂ ಹೆಚ್.ಡಿ.ಕುಮಾರಸ್ವಾಮಿಯವರು ಮತ್ತೆ ತಮ್ಮ ಸಡಿಲ ನಾಲಿಗೆಯಲ್ಲಿ ಸುಳ್ಳುಗಳನ್ನು ಹರಿಯಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಸಿಎಸ್ ಆರ್ ಶಾಲೆಗಳ ಪಟ್ಟಿ ಬಿಡುಗಡೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಫೋನ್ ಸಂಭಾಷಣೆಯಲ್ಲಿ ಡಾ.ಯತೀಂದ್ರ ಹೆಸರಿಸಿದ ವಿವೇಕಾನಂದ ಅವರು ವರುಣ ಕ್ಷೇತ್ರಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ). ವರುಣ ಕ್ಷೇತ್ರಕ್ಕೆ ಸೇರಿರುವ ಹಾರೋಹಳ್ಳಿ, ಕೀಳನಪುರ, ದೇವಲಾಪುರ ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳ ರಿಪೇರಿಯಾಗಬೇಕಾಗಿರುವ ಕೊಠಡಿಗಳ ವಿವರದ ಪಟ್ಟಿಯನ್ನು ಬಿಇಒ ಅವರೇ ನನ್ನ ಕಚೇರಿಯ ಜಂಟಿ ಕಾರ್ಯದರ್ಶಿಗಳಿಗೆ ಕಳಿಸಿದ್ದರು. ಇದರ ಬಗ್ಗೆಯೇ ನಾನು ಡಾ.ಯತೀಂದ್ರ ಅವರ ಜೊತೆಯಲ್ಲಿ ಮಾತನಾಡಿದ್ದು. ಇದಕ್ಕೆ ಸಂಬಂಧಿಸಿದ ದಾಖಲೆಯನ್ನು ಇಲ್ಲಿ ಲಗತ್ತಿಸಿದ್ದೇನೆ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೆಲ್ಲಹಳ್ಳಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಧವಗೆರೆ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಚಟ್ನಹಳ್ಳಿಪಾಳ್ಯ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಡಜನ ಹಾಗೂ ಸರ್ಕಾರಿ ಪೌಢಶಾಲೆ ದೇವಲಾಪುರ.  5 ಸಿಎಸ್ ಆರ್ ಶಾಲೆಗಳ ಪಟ್ಟಿ ನೀಡಿದ್ದಾರೆ.

ಸುಳ್ಳುಕೋರರ ನಂಜಿನ ಆರೋಪಗಳಿಗೆ ವಿವರಣೆ ನೀಡಬೇಕಾದ ಅಗತ್ಯ ಖಂಡಿತ ಇಲ್ಲ. ಆದರೆ ಮಾಧ್ಯಮಗಳಲ್ಲಿ ಪ್ರಸಾರ, ಪ್ರಕಟವಾಗುತ್ತಿರುವ ಸುಳ‍್ಳು ಸುದ್ದಿಗಳನ್ನು ಅಮಾಯಕ ಜನ ನಂಬಿ ತಪ್ಪು ತಿಳಿದುಕೊಳ್ಳಬಾರದು ಎನ್ನುವ ಕಾರಣಕ್ಕೆ ಈ ವಿವರವನ್ನು ನೀಡಿದ್ದೇನೆ. ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡು ಗಳಿಸಿದ ಅಧಿಕಾರವನ್ನು ಕೇವಲ ಹಣದ ಲೂಟಿಗಾಗಿ ದುರ್ಬಳಕೆ ಮಾಡಿಕೊಂಡ ಕುಮಾರಸ್ವಾಮಿಯವರಿಗೆ ಅಭಿವೃದ್ದಿಯ ವಿಚಾರ ಅರ್ಥವಾಗುವಂತಹದ್ದಲ್ಲ ಎಂದು ಟಾಂಗ್ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...