ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಸಿಎಂ ಸಿದ್ದರಾಮಯ್ಯ ಸದ್ಯ ನಾನೇ ಸಿಎಂ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದ ಹೇಳಿಕೆಗೆ ಕಾಂಗ್ರೆಸ್ ನಾಯಕರಲ್ಲಿಯೇ ಹಲವು ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈ ಎಲ್ಲಾ ಬೆಳವಣಿಗೆಗಳಿಗೆ ಬ್ರೇಕ್ ಹಾಕಲು ಸಿಎಂ ಸಿದ್ದರಾಮಯ್ಯ ಇಂದು ಸಚಿವರು ಹಾಗೂ ಶಾಸಕರನ್ನು ಕರೆದು ಉಪಹಾರಕೂಟ ಸಭೆ ನಡೆಸಿದರು.
ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಇಂದು ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜಿಸಲಾಗಿತ್ತು. ಈ ವೇಳೆ ಮೀಟಿಂಗ್ ಹಾಲ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಸ್ವತಃ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕತ್ತರಿ ಕೊಟ್ಟು ಟೇಪ್ ಕಟ್ ಮಾಡಲು ಸೂಚಿಸಿದರು. ನನಗ್ಯಾಕೆ ಕೊಡುತ್ತಿದ್ದೀರಿ? ಎಂದು ಡಿಸಿಎಂ ಪ್ರಶ್ನಿಸುತ್ತಿದ್ದಂತೆ ಪಕ್ಷದ ಅಧ್ಯಕ್ಷರು ಹಾಗಾಗಿ ಅವರೇ ಮಾಡಲಿ ಎಂದು ಎಂದಿದ್ದಾರೆ. ನನ್ನಿಂದಲೇ ಟೇಪ್ ಕಟ್ ಮಾಡಿಸ್ತಿದೀರಾ ಎಂದು ನಗುತ್ತಲೇ ಡಿಸಿಎಂ ಕೇಳಿದ್ದಾರೆ.
ಈ ವೇಳೆ ಸಚಿವ ಡಾ.ಪರಮೇಶ್ವರ್, ಎಂ.ಬಿ.ಪಾಟೀಲ್, ಕೆ.ಎನ್.ರಾಜಣ್ಣ ಕಾಲೆಳೆದ ಘಟನೆಯೂ ನಡೆಯಿತು. ಸಭಾಂಗಣ ಉದ್ಘಾಟನೆ ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೆ ದೇವರಿಗೆ ಪೂಜೆ ಸಲ್ಲಿಸಿದರು.
ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಸಿಎಂ ಹಾಗೂ ಡಿಸಿಎಂ, ಸಚಿವರ ನಡಿವೆ ಆರಂಭವಾಗಿದ್ದ ತಿಕ್ಕಾಟಕ್ಕೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಬ್ರೇಕ್ ಫಾಸ್ಟ್ ಮೀಟಿಂಗ್, ಕಚೇರಿ ಉದ್ಘಾಟನೆ ಕಾರ್ಯಕ್ರಮದ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.