BIG NEWS: ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ; ಬಿಜೆಪಿಯೊಂದಿಗೆ JDS ವಿಲೀನವಾದರೂ ಅಚ್ಚರಿಯಿಲ್ಲ ಎಂದ ಸಿಎಂ

ಬೆಂಗಳೂರು: ಜೆಡಿಎಸ್ ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ ‘ಎಸ್’ ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಕಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಕೈಜೋಡಿಸಿದೆ. ಈ ಹಿಂದೆ ನಾನು ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದು ಟಾಂಗ್ ನೀಡಿದರು.

ಜೆಡಿಎಸ್ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷವಾಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷವಾಗಿದೆ. ಮುಂದೆ ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾದರೂ ಅಚ್ಚರಿ ಇಲ್ಲ ಎಂದರು.

ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ನಾವು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಾಗ ಅವುಗಳನ್ನು ಟೀಕಿಸಿದ್ದ ಪ್ರಧಾನಿ ಮೋದಿಯವರು ಈಗ ‘ಮೋದಿ ಗ್ಯಾರಂಟಿ’ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read