
ವಿಜಯಪುರ: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕಿಡಿ ಕಾರಿರುವ ಸಿಎಂ ಸಿದ್ದರಾಮಯ್ಯ, ಈಶ್ವರಪ್ಪ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಎಲೆಕ್ಷನ್ ಬಳಿಕ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಅದು ಕೇವಲ ಈಶ್ವರಪ್ಪನವರ ಭ್ರಮೆ ಎಂದು ಟಾಂಗ್ ನೀಡಿದರು.
ನಾವು ಐದು ವರ್ಷಗಳ ಕಾಲ ಉತ್ತಮ ಆಡಳಿತ ನೀಡುತ್ತೇವೆ. ಕೆ.ಎಸ್.ಈಸ್ವರಪ್ಪನವರಿಗೆ ಮೆದುಳು, ನಾಲಿಗೆ ಲಿಂಕ್ ಇಲ್ಲ, ಏನೇನೋ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.