![](https://kannadadunia.com/wp-content/uploads/2022/05/yatnals-statement-siddaramaiah-said-showed-he-has-lot-of-information-on-irregularities-committed-in-the-bjp-and-he-shou.png)
ಮೈಸೂರು: ವಿಪಕ್ಷ ನಾಯಕನನ್ನಾಗಿ ಆರ್. ಅಶೋಕ್ ನೇಮಕ ಮಾಡಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಯಾಂತರ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರು, ಆರ್,ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಕ ಮಾಡಿದ್ದಾರೆ. ಈ ಬಗ್ಗೆ ನಿಮ್ಮ ಪ್ರತಿಕ್ರಿಯೆ ಏನು? ಎಂಬ ಪ್ರಶ್ನೆಗೆ, ಬಿಜೆಪಿಯವರು ಯಾರನ್ನಾದರೂ ವಿಪಕ್ಷ ನಾಯಕನನ್ನಾಗಿ ಮಾಡಿಕೊಳ್ಳಲಿ ಅದಕ್ಕೂ ನಮಗೂ ಸಂಬಂಧವಿಲ್ಲ. ಜನ ನಮಗೆ ಸರ್ಕಾರ ನಡೆಸಲಿ ಎಂದು ಆಶಿರ್ವಾದ ಮಾಡಿದ್ದಾರೆ ಎಂದರು.
ರಾಜ್ಯದ ಜನರು ನಮಗೆ ಅಧಿಕಾರ ಕೊಟ್ಟು ಆಶಿರ್ವಾದ ಮಾಡಿದ್ದಾರೆ. ನಾವು ಜನರಿಗೆ ಕೊಟ್ಟ ಗ್ಯಾರಂಟಿ ಯೋಜನೆ ಭರವಸೆಯನ್ನು ಈಡೇರಿಸಿದ್ದೇವೆ. ರಾಜ್ಯದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವತ್ತ ನಮ್ಮ ಗಮನವಿದೆ ಎಂದರು.