alex Certify ಸಿದ್ದರಾಮಯ್ಯ ಬಜೆಟ್ ಆರ್ಥಿಕ ಶಿಸ್ತಿಗೆ ತಿಲಾಂಜಲಿ ಹಾಡಿದೆ : ಮಾಜಿ ಸಚಿವ ಸುಧಾಕರ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ಬಜೆಟ್ ಆರ್ಥಿಕ ಶಿಸ್ತಿಗೆ ತಿಲಾಂಜಲಿ ಹಾಡಿದೆ : ಮಾಜಿ ಸಚಿವ ಸುಧಾಕರ್ ವಾಗ್ದಾಳಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿದ ಬಜೆಟ್ ಕುರಿತಂತೆ ಮಾಜಿ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಬಜೆಟ್ ರಾಜ್ಯದ ಆರ್ಥಿಕ ಶಿಸ್ತಿಗೆ ತಿಲಾಂಜಲಿ ಹಾಡಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಜಾರಿ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ರಾಜ್ಯವನ್ನು ಆರ್ಥಿಕ ದಿವಾಳಿಯತ್ತ ಕೊಂಡೊಯ್ಯಲು ಸಿದ್ದರಾಮಯ್ಯ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯರ ಆಯವ್ಯಯ ಭಾಷಣದಲ್ಲಿ ಬರೀ ರಾಜಕೀಯ ಇತ್ತು. ಕಾಂಗ್ರೆಸ್ ಪಕ್ಷವು ಇನ್ನೂ ಚುನಾವಣಾ ಗುಂಗಿನಲ್ಲೇ ಇದೆ. ಬಜೆಟ್ ನಲ್ಲಿ ಅಭಿವೃದ್ಧಿ ಪೂರಕವಾದ ಅಂಶಗಳೇ ಇಲ್ಲ. ರಾಜ್ಯದ ಅಭಿವೃದ್ಧಿಯೂ ರಿವರ್ಸ್ ಗೇರ್ ನಲ್ಲಿ ಹಿಂದಕ್ಕೆ ಹೋಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...