ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ಯುವಕನ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ ನೀಡಿದ್ದ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ರೀತಿಯಲ್ಲಿ ರಿಮೇಕ್ ಮಾಡಿ ವೈರಲ್ ಮಾಡಿರುವ ಆರೋಪದಲ್ಲಿ ಯುವಕ ಶರತ್ ಗೌಡ ಎಂಬಾತನ ವಿರುದ್ಧ ಯೂತ್ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದಾರೆ.
ಹಣ ಎಲ್ಲಿಂದ ತರಲಿ? ಚುನಾವಣೆಗೋಸ್ಕರ ಹೇಳಿರುತ್ತೇವೆ. ಹೇಳಿದಂತೆ ನಡೆದುಕೊಳ್ಳಲು ಆಗುತ್ತಾ? ಎಂದು ಸಿದ್ದರಾಮಯ್ಯನವರು ಹೇಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದು 2009ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹೇಳಿದ್ದ ಮಾತುಗಳಾಗಿದ್ದು, ಅದನ್ನು ಈಗ ಸಿದ್ದರಾಮಯ್ಯನವರು ಹೇಳಿದಂತೆ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ಆರೋಪಿಸಿ ಯುವಕನ ವಿರುದ್ಧ ದೂರು ದಾಖಲಿಸಲಾಗಿದೆ.