ಬೆಂಗಳೂರು: ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕರದ ವಿರುದ್ಧ ಟೀಕೆ ಮಾಡುತ್ತಿದ್ದಂತೆ ವಿಪಕ್ಷ ಬಿಜೆಪಿ ನಾಯಕರು ಸದನದಲ್ಲಿ ಗದ್ದಲ ಆರಂಭಿಸಿದರು.
ಬಜೆಟ್ ನ್ನು ಕೇಂದ್ರದ ವಿರುದ್ಧ ಟೀಕೆಗೆ ಬಳಸುತ್ತೀರಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು. ಈ ವೇಳೆ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸ್ಪೀಕರ್ ಯು.ಟಿ.ಖಾದರ್ ಬಿಜೆಪಿ ಸದಸ್ಯರಿಗೆ ಮಾತನಾಡದಂತೆ ಸೂಚಿಸಿದರೂ ಕೇಳದೇ ಸರ್ಕರದ ವಿರುದ್ಧ ಹರಿಹಾಯ್ದರು.
ಬಿಜೆಪಿ ಸದಸ್ಯರ ಗದ್ದಲದ ನಡುವೆಯೇ ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣ ಮುಂದುವರೆಸಿದ್ದಾರೆ.