alex Certify ಮಧ್ಯವರ್ತಿಗಳು ಕಚೇರಿಯತ್ತಲು ಸುಳಿಯಬಾರದು; ಬಡ ಜನರು, ಅವಿದ್ಯಾವಂತರ ಕಣ್ಣೀರು ಒರೆಸಿ; KAS ಅಧಿಕಾರಿಗಳಿಗೆ ಸಿಎಂ ಕಿವಿಮಾತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯವರ್ತಿಗಳು ಕಚೇರಿಯತ್ತಲು ಸುಳಿಯಬಾರದು; ಬಡ ಜನರು, ಅವಿದ್ಯಾವಂತರ ಕಣ್ಣೀರು ಒರೆಸಿ; KAS ಅಧಿಕಾರಿಗಳಿಗೆ ಸಿಎಂ ಕಿವಿಮಾತು

ಬೆಂಗಳೂರು: ಬಡ ಜನರು, ಅವಿದ್ಯಾವಂತರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಹಶೀಲ್ದಾರ್ ಗಳಿಗೆ ಕಿವಿಮಾತು ಹೇಳಿದ್ದಾರೆ.

ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ಕೆ ಎಎಸ್ ಅಧಿಕಾರಿಗಳ ಹೃದಯ ಮಿಡಿಯಬೇಕು. ಮಧ್ಯವರ್ತಿಗಳು ಕಚೇರಿ ಬಳಿ ಸುಳಿಯದಂತೆ ಜನ ಸೇವೆ ಮಾಡಿ ಎಂದು ಕರೆ ನೀಡಿದರು.

ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಹಾಗಾಗಿ ಹೆಚ್ಚು ಜನಪರವಾಗಿದ್ದು, ಅವರ ಕಷ್ಟ ಸುಖಗಳಿಗೆ ಸ್ಪಂದಿಸಿ. ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರ ತೆರಿಗೆ ಹಣದಲ್ಲಿ ಸವಲತ್ತುಗಳು ಸಿಕ್ಕಿವೆ. ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸೌಲಭ್ಯ ಸಿಕ್ಕಿವೆ. ಜನರ ಅಭಿವೃದ್ದಿಯೇ ನಮ್ಮ ಗುರಿಯಾಗಬೇಕು ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...