
ಬೆಂಗಳೂರು: ಸಿದ್ದರಾಮಯ್ಯಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅವಕಾಶವಿದೆ ಎಂದು ಮಾಜಿ ಸಚಿವ ಹೆಚ್.ಎಂ. ರೇವಣ್ಣ ಹೇಳಿದ್ದಾರೆ.
ಕುರುಬ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಲಿಷ್ಠ ನಾಯಕರು. ಬಲಿಷ್ಠ ಸಿದ್ದರಾಮಯ್ಯನವರ ಮೇಲೆ ಕೂಗುಮಾರಿಗಳು ಮುಗಿಬೀಳುತ್ತಾರೆ. ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಎಲ್ಲಾ ಅವಕಾಶವಿದೆ. ಸಿದ್ದರಾಮಯ್ಯ ಸ್ವಾಭಿಮಾನ ಮತ್ತು ಧೈರ್ಯವನ್ನು ತಂದುಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.