
ವಿಜಯಪುರ: ಮಹಾ ಸಂತ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಸ್ವಾಮೀಜಿ ವಿಧಿವಶರಾದ ಹಿನ್ನಲೆಯಲ್ಲಿ ವಿಜಯಪುರ ಜಿಲ್ಲೆಯ ಶಾಲಾ, ಕಾಲೇಜುಗಳು, ಸರ್ಕಾರಿ ಕಚೇರಿಗಳಿಗೆ ಸರ್ಕಾರ ಒಂದು ದಿನ ರಜೆ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದೆ.