BREAKING: ಪಂಚಭೂತಗಳಲ್ಲಿ ಲೀನರಾದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ವಿವಿಧ ಮಠಾಧೀಶರು ಶ್ರೀಗಳ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟಿದ್ದಾರೆ. ಶತಮಾನದ ಸಂತನ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ನಾಡಿನ ಗಣ್ಯರು, ಮಠಾಧೀಶರು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದರು.

ಸೈನಿಕ ಶಾಲೆ ಆವರಣದಿಂದ ಜ್ಞಾನ ಯೋಗಾಶ್ರಮಕ್ಕೆ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ನಡೆದಿದ್ದು, ಲಕ್ಷಾಂತರ ಭಕ್ತರು ಭಾಗವಹಿಸಿದ್ದರು. ನಂತರ ಮಲ್ಲಿಕಾರ್ಜುನ ಶಿವಯೋಗಿ ಸ್ವಾಮೀಜಿ ಗದ್ದುಗೆ ಬಳಿ ಶ್ರೀಗಳ ಪಾರ್ಥಿವ ಶರೀರ ಇರಿಸಿ ಪೂಜೆ ನೆರವೇರಿಸಲಾಗಿದೆ.

ಜ್ಞಾನ ಯೋಗಾಶ್ರಮದ ಆವರಣದಲ್ಲಿ ಅಂತ್ಯಕ್ರಿಯೆ ಸ್ಥಳದ ವೇದಿಕೆಯಲ್ಲಿ ಶ್ರೀಗಳ ಪಾರ್ಥಿವ ಶರೀರ ಇರಿಸಿ ಅಂತಿಮ ವಿಧಿ ವಿಧಾನ ನೆರವೇರಿಸಿ ಚಿತೆಗೆ ಅಗ್ನಿ ಸ್ಪರ್ಶ ಮಾಡಲಾಗಿದೆ. ಜ್ಞಾನ ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಶ್ರೀಗಳು ಅಗ್ನಿಸ್ಪರ್ಶ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read