ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಕನ್ನಡದಲ್ಲಿಯೇ ಟ್ವಿಟ್ ಮಾಡಿರುವ ಪ್ರಧಾನಿ ಮೋದಿ ಅವರು, ‘ಪರಮ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು. ಅವರ ಜ್ಞಾನೋತ್ಸಹಕ್ಕಾಗಿ ಗೌರವ ಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ’ ಎಂದು ಸಂತಾಪ ಸೂಚಿಸಿದ್ದಾರೆ.
https://twitter.com/narendramodi/status/1609974884649832448