ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ನವಜೋತ್ ಸಿಂಗ್ ಸಿಧು ಬೆಂಬಲಿಸಿ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ದಿಢೀರ್ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆ ಬೆನ್ನಲ್ಲೇ ಇಬ್ಬರು ಸಚಿವರು ರಾಜೀನಾಮೆ ನೀಡಿದ್ದಾರೆ. ಸಿಧು ರಾಜೀನಾಮೆಯನ್ನು ಅಂಗೀಕರಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ. ಅವರೊಂದಿಗೆ ಸಮಾಲೋಚನೆ ನಡೆಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಸಿಧು ಬೆಂಬಲಿಸಿ ಶಿಕ್ಷಣ ಸಚಿವ ಪರಗತ್ ಸಿಂಗ್ ಮತ್ತು ರಜಿಯಾ ಸುಲ್ತಾನಾ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಯೋಗೇಂದ್ರ ಧಿಂಗ್ರಾ ರಾಜೀನಾಮೆ ನೀಡಿದ್ದಾರೆ.