alex Certify BIG NEWS: ಮುಂದಿನ ಡಿಸೆಂಬರ್ ವೇಳೆಗೆ ‘ಸಿಗಂದೂರು’ ಸೇತುವೆ ಪೂರ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ ಡಿಸೆಂಬರ್ ವೇಳೆಗೆ ‘ಸಿಗಂದೂರು’ ಸೇತುವೆ ಪೂರ್ಣ

Shigandur Bridge,ಸಿಗಂದೂರು ಸೇತುವೆ ಕಾಮಗಾರಿಗೆ ಜಲ ಅಡ್ಡಿ, 2 ವರ್ಷವಾದರೂ ತೆವಳುತ್ತಿರುವ ಕಾಮಗಾರಿ! - water disruption to shigandur bridge construction says national highway development authority - Vijay ...

ಈ ವರ್ಷಾಂತ್ಯಕ್ಕೆ ಪೂರ್ಣಗೊಳ್ಳಬೇಕಿದ್ದ ಕಳಸವಳ್ಳಿ – ಸಿಗಂದೂರು ಸೇತುವೆ ಕಾಮಗಾರಿ ವಿವಿಧ ಕಾರಣಗಳಿಗೆ ವಿಳಂಬವಾಗಿದ್ದು, ಹೀಗಾಗಿ ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಸಾರ್ವಜನಿಕರ ಬಳಕೆಗೆ ಲೋಕಾರ್ಪಣೆಗೊಳ್ಳುವ ನಿರೀಕ್ಷೆ ಇದೆ.

ಭಾನುವಾರದಂದು ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ ಈ ಮಾಹಿತಿ ನೀಡಿದ್ದು, ಅತಿವೃಷ್ಟಿ ಹಾಗು ಅನಾವೃಷ್ಟಿ ಕಾರಣಕ್ಕೆ ಶರಾವತಿ ಹಿನ್ನೀರು ಪ್ರದೇಶದಲ್ಲಿ ನೀರಿನ ಪ್ರಮಾಣ ಹೆಚ್ಚು ಕಡಿಮೆಯಾದ ಹಿನ್ನೆಲೆಯಲ್ಲಿ ಸಾಮಗ್ರಿ ಸಾಗಿಸಲು ಸಾಧ್ಯವಾಗದ್ದರಿಂದ ಸೇತುವೆ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಜನವರಿ 2ನೇ ಅಥವಾ 3ನೇ ವಾರದಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಈ ಸಂದರ್ಭದಲ್ಲಿ ಸೇತುವೆ ಕಾಮಗಾರಿಗೆ ವೇಗ ನೀಡುವ ಕುರಿತಂತೆ ಚರ್ಚೆ ನಡೆಸಲಾಗುತ್ತದೆ. ಬಹುತೇಕ ಮುಂದಿನ ವರ್ಷದ ಡಿಸೆಂಬರ್ ವೇಳೆಗೆ ಸಿಗಂದೂರು ಸೇತುವೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...