alex Certify ವಸತಿ ಯೋಜನೆ: ಸೈಟ್ ಹೊಂದಿದವರಿಗೆ ಮನೆ ನಿರ್ಮಿಸಿಕೊಡಲು ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಯೋಜನೆ: ಸೈಟ್ ಹೊಂದಿದವರಿಗೆ ಮನೆ ನಿರ್ಮಿಸಿಕೊಡಲು ಅರ್ಜಿ

ರಾಯಚೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಡಿ 2021-22ನೇ ಸಾಲಿಗೆ ಪರಿಶಿಷ್ಟ ಪಂಗಡದ ವಸತಿ ರಹಿತ ನಿವೇಶನ ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ ನಿರ್ಮಾಣ ಯೋಜನೆಯಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಅವಧಿಯನ್ನು ಮಾ. 31 ರವರೆಗೆ ವಿಸ್ತರಿಸಲಾಗಿದೆ.

ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

 ಅರ್ಹತೆಗಳು:

ಅರ್ಜಿದಾರರು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಹಾಗೂ ಕಳೆದ ಕನಿಷ್ಟ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅರ್ಜಿದಾರರು 18 ವರ್ಷ ಮೇಲ್ಪಟ್ಟವರಾಗಿರಬೇಕು, ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ 98,000 ರೂ. ಹಾಗೂ ನಗರ ಪ್ರದೇಶವಾದಲ್ಲಿ 1,20,000 ರೂ. ಮಿತಿಯೊಳಗಿರಬೇಕು, ಅರ್ಜಿದಾರರ ಕುಟಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರಿ ಸಂಸ್ಧೆಯ ನೌಕರಿಯಲ್ಲಿರಬಾರದು, ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪರಿಶಿಷ್ಟ ಪಂಗಡದ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಶೇ.5 ರಷ್ಟು ಮೀಸಲಾತಿಯನ್ನು ನೀಡಿ ಸೌಲಭ್ಯ ಕಲ್ಪಿಸಲಾಗುವುದು.

ದಾಖಲಾತಿಗಳು:

ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರ. ಜಾತಿ ಪ್ರಮಾಣ ಪತ್ರ, ಕುಟುಂಬದ ವಾರ್ಷಿಕ ವರಮಾನ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ,ಅರ್ಜಿದಾರರು ಹೊಂದಿರುವ ಬ್ಯಾಂಕ್ ಉಳಿತಾಯ ಖಾತೆಯ ಪಾಸ್ ಬುಕ್‌ನ ಮೊದಲ ಪುಟದ ಪ್ರತಿ, ನಿರಾಪೇಕ್ಷಣಾ ಪತ್ರ ಖಾತೆ, ಸೈಟ್ ಅಥವಾ ನಿವೇಶನಕ್ಕೆ  ಸಂಬAಧ ಪಟ್ಟ ದಾಖಲಾತಿಗಳೊಂದಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...