ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ, ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಫಲಾನುಭವಿಗಳಿಗೆ 2021-22 ನೇ ಸಾಲಿಗೆ ವಾಜಪೇಯಿ ನಗರ ಯೋಜನೆಯಲ್ಲಿ, ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ ವರ್ಗದವರಿಗೆ ಹಾಗೂ ಡಾ.ಅಂಬೇಡ್ಕರ್ ನಗರ ವಸತಿ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮನೆ ನಿರ್ಮಿಸಲು ಅರ್ಜಿ ಸಲ್ಲಿಸಬಹುದಾಗಿದೆ.
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವವರು, ಖಾಲಿ ನಿವೇಶನ ಹೊಂದಿರುವ ದಾಖಲೆ ಪತ್ರ ಹಾಗೂ ಇನ್ನಿತರೆ ಅಗತ್ಯ ದಾಖಲೆ ಪತ್ರ ಇರುವ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಅರ್ಹ ಫಲಾನುಭವಿಗಳು ಜನವರಿ, 29 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ವಿವರಗಳಿಗೆ ಕಚೇರಿಯ ಕೆಲಸದ ವೇಳೆಯಲ್ಲಿ ವಸತಿ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಕೋರಿದ್ದಾರೆ.