ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರಸಭೆಯ ವಿವಾದಿತ ಜಾಗಕ್ಕಾಗಿ ಜಟಾಪಟಿ ಶುರುವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರಸಭೆಗೆ ಸೇರಿದ ಜಾಗದ ಬಗ್ಗೆ ಗೌರಿಬಿದನೂರಿನ ಶ್ರೀರಾಮ ಭಜನಾ ಮಂದಿರ ಟ್ರಸ್ಟ್ ಹಾಗೂ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಜಾಗಕ್ಕಾಗಿ ಜಟಾಪಟಿ ನಡೆದಿದೆ.
ವಿವಾದಿತ ಜಾಗದಲ್ಲಿ ರಾತ್ರೋರಾತ್ರಿ ಪ್ರತಿಮೆಗಳನ್ನು ಸ್ಥಾಪನೆ ಮಾಡಲಾಗಿದೆ. ರಾಮ, ಸೀತೆ ಹಾಗೂ ಲಕ್ಷ್ಮಣರ ಪ್ರತಿಮೆಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ನಗರಸಭೆಯ ಎದುರು ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಧರಣಿ ನಡೆಸಲಾಗಿದೆ. ವಿವಾದಿತ ಜಾಗದ ಸಮೀಪ ಟ್ರಸ್ಟ್ ನವರು ಜಮಾವಣೆಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಭೇಟಿ ನೀಡಿ, ಎರಡೂ ಕಡೆಯವರ ಜೊತೆಗೆ ಮಾತುಕತೆ ನಡೆಸಿದ್ದಾರೆ.