ದೊಡ್ಡಬಳ್ಳಾಪುರ: ಜನವರಿ 19 ರಂದು ಯಾದಗಿರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಅಲೆಮಾರಿ ಜನಾಂಗಕ್ಕೆ ನಿವೇಶನ ಕೊಡುವ ಯೋಜನೆ ಮಾಡಿದ್ದೇವೆ. ಕಂದಾಯ ಸಚಿವನಾಗಿ ಐತಿಹಾಸಿಕ ನಿರ್ಣಯ ಕೈಗೊಂಡಿದ್ದೇವೆ. ನೋಂದಣಿ ಮಾಡಿಸಿ ಕಂದಾಯ ಗ್ರಾಮವನ್ನಾಗಿ ಘೋಷಿಸುತ್ತೇವೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ದಾಖಲೆ ನೋಂದಣಿ ಮಾಡಿಸುತ್ತೇವೆ ಎಂದು ಹೇಳಿದ್ದಾರೆ.
ಅಲೆಮಾರಿ ಸಮುದಾಯ ನೆಮ್ಮದಿಯಿಂದ ಬದುಕಲು ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಇಡೀ ರಾಜ್ಯದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ. ಕುರುಬರ ಹಟ್ಟಿ, ಲಂಬಾಣಿ ತಾಂಡಾಗಳ ನಿವಾಸಿಗಳಿಗೆ ಅನುಕೂಲವಾಗುತ್ತದೆ. ಕಾರ್ಯಕ್ರಮ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ. ಒಂದು ಲಕ್ಷ ಕುಟುಂಬಗಳಿಗೆ ಸೈಟ್ ಕೊಡುವ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಲಾಗುವುದು ಎಂದು ದೊಡ್ಡಬಳ್ಳಾಪುರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.