ಬೆಂಗಳೂರು: ಗ್ರಾಮೀಣ ಪ್ರದೇಶದ ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಸಕ್ರಮಕ್ಕೆ ಅರ್ಜಿ ಸ್ವೀಕಾರ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ
ಗ್ರಾಮೀಣ ಭಾಗದಲ್ಲಿ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ವಾಸದ ಮನೆ ನಿರ್ಮಿಸಿಕೊಂಡಿದ್ದರೆ ಸಕ್ರಮಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ 94ಸಿ ಅಡಿ ಅರ್ಜಿ ಸ್ವೀಕರಿಸುವ ಅವಧಿಯನ್ನು 2022ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.
ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, 2023 ರ ಮಾರ್ಚ್ 31ರವರೆಗೆ ಅರ್ಜಿಗಳ ಇತ್ಯರ್ಥ ಪಡಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ 2015ರ ಜನವರಿ 1 ಕ್ಕೆ ಮೊದಲು ಅನಧಿಕೃತವಾಗಿ ನಿರ್ಮಾಣವಾದ 30X40, 40X60, 50X80 ಅಳತೆಯ ವಾಸದ ಮನೆಗಳ ಸಕ್ರಮಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.