ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗಿದೆ.
ಇವತ್ತು ನಡೆದ ಅಗ್ನಿ ದುರಂತದಲ್ಲಿ ಐವರು ಸಿಬ್ಬಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಸಂಸ್ಥೆಯ ಎಂಡಿ ಸೈರಸ್ ಪೂನಾವಾಲಾ ಈ ಬಗ್ಗೆ ಮಾಹಿತಿ ನೀಡಿ, ಇಂದು ಸೆರಮ್ ಇನ್ಸ್ಟಿಟ್ಯೂಟ್ ನಲ್ಲಿ ನಡೆದ ಘಟನೆ ನೋವು ತಂದಿದೆ. ಇದರಿಂದ ತುಂಬಾ ದುಃಖಿತನಾಗಿದ್ದೇನೆ. ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಪ್ರತಿ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.