alex Certify BIG NEWS: ಇಂದಿನಿಂದಲೇ ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ; ಉತ್ತರ ಪ್ರದೇಶ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದಲೇ ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ; ಉತ್ತರ ಪ್ರದೇಶ ಸರ್ಕಾರ ಆದೇಶ

ಲಖ್ನೋ: ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತರಗತಿಗಳನ್ನು ಪ್ರಾರಂಭಿಸುವ ಮೊದಲು ರಾಷ್ಟ್ರಗೀತೆಯನ್ನು ಹಾಡುವುದನ್ನು ಉತ್ತರ ಪ್ರದೇಶ ಸರ್ಕಾರ ಕಡ್ಡಾಯಗೊಳಿಸಿದೆ.

ಇಂದಿನಿಂದಲೇ ಆದೇಶ ಜಾರಿಗೆ ಬಂದಿದೆ. ಯುಪಿ ಅಲ್ಪಸಂಖ್ಯಾತ ರಾಜ್ಯ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಈ ಆದೇಶವನ್ನು ಹೊರಡಿಸಿದ್ದಾರೆ. ಮಾರ್ಚ್ 24 ರಂದು ನಡೆದ ಯುಪಿ ಮದ್ರಸಾ ಶಿಕ್ಷಣ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅನುಷ್ಠಾನದ ಆದೇಶವನ್ನು ಮೇ 9 ರಂದು ಅಂಗೀಕರಿಸಲಾಗಿದೆ. ಆದೇಶದ ಪ್ರಕಾರ, ಶಾಲೆಗಳಲ್ಲಿ ರಾಷ್ಟ್ರಗೀತೆ-“ಜನ ಗಣ ಮನ” ಜೊತೆಗೆ ಹಿಂದೆ ಹಾಡಿದ ಧಾರ್ಮಿಕ ಪ್ರಾರ್ಥನೆಗಳೊಂದಿಗೆ ಮುಂದುವರಿಯುತ್ತದೆ.

ರಂಜಾನ್ ಪ್ರಯುಕ್ತ ಮಾರ್ಚ್ 30 ರಿಂದ ಮೇ 11 ರವರೆಗೆ ಮದರಸಾಗಳನ್ನು ಮುಚ್ಚಲಾಗಿತ್ತು. ಮೇ 12 ರಂದು ಶಾಲೆಗಳು ಪುನರಾರಂಭವಾಗಿದ್ದು, ಇಂದಿನಿಂದ ಆದೇಶವನ್ನು ಜಾರಿಗೊಳಿಸಲಾಗಿದೆ. ಈ ಆದೇಶವು ಎಲ್ಲಾ ಮಾನ್ಯತೆ ಪಡೆದ, ಅನುದಾನಿತ ಮತ್ತು ಅನುದಾನ ರಹಿತ ಮದರಸಾಗಳಿಗೆ ಅನ್ವಯಿಸುತ್ತದೆ.

ಯುಪಿ ಮದ್ರಸಾ ಮಂಡಳಿಯು 2017 ರಲ್ಲಿ ಸ್ವಾತಂತ್ರ್ಯ ದಿನದಂದು ರಾಷ್ಟ್ರಗೀತೆ ಮತ್ತು ಧ್ವಜಾರೋಹಣವನ್ನು ಕಡ್ಡಾಯಗೊಳಿಸಿದ ಸುಮಾರು ಐದು ವರ್ಷಗಳ ನಂತರ ಈ ನಿರ್ಧಾರ ಜಾರಿಗೆ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...