alex Certify ಸರ್ಕಾರದ ಎಲ್ಲಾ ಕಚೇರಿ, ಸಭೆ, ಸಮಾರಂಭಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿ ಮತ್ತೆ ಸುತ್ತೋಲೆ: ಆದೇಶ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದ ಎಲ್ಲಾ ಕಚೇರಿ, ಸಭೆ, ಸಮಾರಂಭಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿ ಮತ್ತೆ ಸುತ್ತೋಲೆ: ಆದೇಶ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ಬೆಂಗಳೂರು: ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಮತ್ತೆ ಸುತ್ತೋಲೆ ಹೊರಡಿಸಿದೆ. 2018ರ ಆದೇಶ ಪಾಲನೆ ಆಗದಿರುವುದಕ್ಕೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ ಎಲ್ಲಾ ಕಚೇರಿಗಳು, ಸಭೆ, ಸಮಾರಂಭಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆಯನ್ನು ನಿಷೇಧಿಸಿದ ಆದೇಶ ಪಾಲನೆಗೆ ಸೂಚನೆ ನೀಡಿದ್ದಾರೆ.

ಏಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದ್ದರೂ ಇದು ಪಾಲನೆ ಆಗದಿರುವುದು ಸಮಂಜಸವಲ್ಲ. ಇನ್ನು ಮುಂದೆ ಕಟ್ಟುನಿಟ್ಟಾಗಿ ಆದೇಶ ಪಾಲನೆಯಾಗಬೇಕೆಂದು ಸೂಚನೆ ನೀಡಿದ್ದಾರೆ.

ರಾಜ್ಯದ ಸರ್ಕಾರಿ ಕಚೇರಿ, ಸರ್ಕಾರಿ ಸ್ವಾಮ್ಯದ ನಿಗಮ, ಮಂಡಳಿ, ವಿಶ್ವವಿದ್ಯಾಲಯ, ಸರ್ಕಾರದ ಅನುದಾನ ಪಡೆಯುವ ಯಾವುದೇ ಸಂಸ್ಥೆಗಳಿಂದ ಆಯೋಜಿಸುವ ಸಭೆ, ಸಮಾರಂಭಗಳಲ್ಲಿ ಏಕಕಾಲಿಕ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಕೆ ನಿಷೇಧಿಸಿ 2018ರ ಸೆಪ್ಟಂಬರ್ 5 ರಂದು ಆದೇಶ ಹೊರಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಆದೇಶ ಪಾಲನೆ ಆಗುತ್ತಿಲ್ಲ. ಇದು ಸಮಂಜಸವಲ್ಲ, ಸರ್ಕಾರದ ಆದೇಶವನ್ನು ಇನ್ನು ಮುಂದೆ ಕಟ್ಟು ನಿಟ್ಟಾಗಿ ಪಾಲಿಸಬೇಕು. ಏಕ ಬಳಕೆ ಪ್ಲಾಸ್ಟಿಕ್ ಬಾಟಲಿಗಳ ಬದಲು ಗ್ಲಾಸ್ ಅಥವಾ ಸ್ಟೀಲ್ ಲೋಟಗಳಲ್ಲಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...