
ದಾವಣಗೆರೆ: ಸಿರಿಗೆರೆ ಮತ್ತು ಸಾಣೇಹಳ್ಳಿ ಸ್ವಾಮೀಜಿಗಳ ಪೀಠ ತ್ಯಾಗಕ್ಕೆ ಒತ್ತಾಯ ಕೇಳಿಬಂದಿದೆ. ಉತ್ತರಾಧಿಕಾರಿ ನೇಮಕಕ್ಕೆ ಸಮುದಾಯದ ಮುಖಂಡರು ಸ್ವಾಮೀಜಿಗಳಿಗೆ ಪತ್ರ ಬರೆದಿದ್ದಾರೆ.
ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮತ್ತು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ ವಯಸ್ಸಾಗಿದ್ದು, ಹೊಸಬರ ನೇಮಕಕ್ಕೆ ಅವರ ಮನವೊಲಿಸಲು ಮಾಡಲಾಗುವುದು ಎಂದು ಸಮಾಜದ ಮುಖಂಡ ಹಾಗೂ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸಿರಿಗೆರೆ ಮಠದ ಹಿರಿಯ ಗುರುಗಳಾದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಕನಸಿನಂತೆ 60 ವರ್ಷಕ್ಕೆ ಪೀಠತ್ಯಾಗ ಮಾಡಬೇಕು. ಇದರ ಬಗ್ಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಶೀಘ್ರವೇ ಸ್ವಾಮೀಜಿಗಳನ್ನು ಭೇಟಿಯಾಗಿ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.