alex Certify ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಆಟ ಆಡಿದವರು ಎಲ್ಲಿ ಹೋದ್ರು…? ಕಾಂಗ್ರೆಸ್ ನಾಯಕರ ಬಗ್ಗೆ ಶ್ರೀನಿವಾಸ ಪ್ರಸಾದ್ ವ್ಯಂಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ ಚುನಾವಣೆಯಲ್ಲಿ ನನ್ನ ವಿರುದ್ಧ ಆಟ ಆಡಿದವರು ಎಲ್ಲಿ ಹೋದ್ರು…? ಕಾಂಗ್ರೆಸ್ ನಾಯಕರ ಬಗ್ಗೆ ಶ್ರೀನಿವಾಸ ಪ್ರಸಾದ್ ವ್ಯಂಗ್ಯ

ಮೈಸೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯವಾಡಿದ್ದಾರೆ. ಉಪಚುನಾವಣೆಯಲ್ಲಿ ನನ್ನ ವಿರುದ್ಧ ಗೆದ್ದವನು ಈಗ ಎಲ್ಲಿ ಹೋದ ಎಂದು ಪ್ರಶ್ನಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಮಾತನಾಡಿದ ಅವರು, ಈಗ ಅವನನ್ನು ಒದ್ದು ಕಳುಹಿಸಿದ್ದಾರೆ. ಆತ ಈಗ ಪತ್ತೆ ಇಲ್ಲ. ಅವನೇನು ಈಗ ದನ ಮೇಯಿಸಲು ಹೋದನೆ? ಎಮ್ಮೆ ಮೇಯಿಸಲು ಹೋದನೇ ಗೊತ್ತಿಲ್ಲ ಎಂದು ಕಳಲೆ ಕೇಶವಮೂರ್ತಿ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಆತನ ಜಾಗಕ್ಕೆ ಬರಲು ಧ್ರುವನಾರಾಯಣ, ಮಹದೇವಪ್ಪ ಕಚ್ಚಾಡುತ್ತಿದ್ದಾರೆ. ಉಪಚುನಾವಣೆಯಲ್ಲಿ ನನ್ನ ವಿರುದ್ಧ ಆಟ ಆಡಿದವರು ಎಲ್ಲಿ ಹೋದರು? ನನ್ನ ವಿರುದ್ಧ ಆಟ ಆಡಿದವರಲ್ಲಿ ಒಬ್ಬ ಟೀನರಸೀಪುರದಲ್ಲಿ ಅವಿತುಕೊಂಡ. ಸಿದ್ದರಾಮಯ್ಯ ಪಂಚೆ ಎತ್ತಿಕೊಂಡು ಕೋಲಾರ ಕ್ಷೇತ್ರಕ್ಕೆ ಹೋದರು ಎಂದು ವಾಗ್ದಾಳಿ ನಡಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...