ಶಿರಸಿ: ದೇವಾಲಯದ ಗರ್ಭಗುಡಿಯಲ್ಲಿದ್ದ ಶಿವಲಿಂಗದ ಮೇಲೆ ಕಿಡಿಗೇಡಿಗಳು ಚಾಕ್ ಪೀಸ್ ನಿಂದ ಬರೆದು ವಿಕೃತಿ ಮೆರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರಬೈಲ್ ಗ್ರಾಮದ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ನಡೆದಿದೆ.
ದೇವಸ್ಥಾನದ ಗರ್ಭಗುಡಿಯಲ್ಲಿರುವ ಸೋಮೇಶ್ವರ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರಗಳಲ್ಲಿ ಬರೆಯಲಾಗಿದೆ. ಬೆಳಿಗ್ಗೆ ಗರ್ಭಗುಡಿ ಬಾಗಿಲು ತೆರೆದಾಗ ಅರ್ಚಕರು ಶಾಕ್ ಆಗಿದ್ದಾರೆ.
ಶಿವಲಿಂಗದ ಮೇಲೆ ಜೆಇಎಸ್ 2024, 2026 ಎಂದು ಬರೆಯಲಾಗಿದೆ. ಶಿವಲಿಂಗದ ಮೇಲಿನ ಅಕ್ಷರಗಳು ಹಲವು ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.