
ನವದೆಹಲಿ: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಮಾಜಿ ಮುಖ್ಯ ಕಾರ್ಯದರ್ಶಿ, ಐಎಎಸ್ ಅಧಿಕಾರಿ ಜಿತೇಂದ್ರ ನಾರಾಯಣ್ ಅವರನ್ನು ಎಸ್ಐಟಿ ಬಂಧಿಸಿದೆ.
ಹಿರಿಯ ಐಎಎಸ್ ಅಧಿಕಾರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನಾರಾಯಣ್ ಅವರನ್ನು ಇತರ ಆರೋಪಿಗಳೊಂದಿಗೆ 21 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧಿಸಲಾಗಿದೆ.
ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿಕಾರಿಯನ್ನು ಬಂಧಿಸಿದೆ.
ಈ ಹಿಂದೆ, ಜಾಮೀನಿಗಾಗಿ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸುಪ್ರೀಂ ಕೋರ್ಟ್ ಅವರಿಗೆ ಸೂಚಿಸಿತ್ತು.
ಈಗಾಗಲೇ ಬಂಧನ ಪ್ರಕ್ರಿಯೆ ಆರಂಭಿಸಿ ಬಂಧನದ ಮೆಮೋ ಸಿದ್ಧಪಡಿಸಲಾಗಿದ್ದು, ಅವರ ಕುಟುಂಬಕ್ಕೂ ಮಾಹಿತಿ ನೀಡಲಾಗಿದೆ. ಹೆಚ್ಚಿನ ತನಿಖೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಲಾಗಿದೆ.