ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಅಂತರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಆತನ ಸಹಚರರ ವಿರುದ್ಧ ಎಸ್ಐಟಿ ಕೋಕಾ(ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಕಾಯ್ದೆ ಪ್ರಯೋಗಿಸಿದೆ.
ಬಿಟ್ ಕಾಯಿನ್ ಹಗರಣ ಸಂಬಂಧ ಶ್ರೀಕಿ ಮತ್ತು ಆತನ ಸ್ನೇಹಿತ ರಾಬಿನ್ ಖಂಡೇವಾಲಾ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಹಂತದಲ್ಲಿ ಉಳಿದ ಆರೋಪಿಗಳಿಗೂ ಈ ಕಾಯ್ದೆ ಅನ್ವಯಿಸಲಾಗುವುದು.
ಕೋಕಾ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಬಂಧಿತನಾಗಿರುವ ಶ್ರೀಕಿ ಮತ್ತು ಆತನ ಸ್ನೇಹಿತರಿಗೆ ಸಂಕಷ್ಟ ಎದುರಾಗಲಿದ್ದು, ಒಂದು ವರ್ಷ ಆರೋಪಿಗಳಿಗೆ ಜಾಮೀನು ಸಿಗುವುದಿಲ್ಲ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲೇ ಕೊಳೆಯಬೇಕಾಗುತ್ತದೆ.