
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಸಚಿವರೊಬ್ಬರ ಆಪ್ತನನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ.
ನೆಕ್ಕುಂಟಿ ನಾಗರಾಜ್ ಎಂಬುವರನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ಈತನೇ ವಾಲ್ಮೀಕಿ ನಿಗಮದ ಅಧಿಕಾರಿಗಳ ಮೇಲೆ ಒತ್ತಡ ಹೇರಿ ನಿಗಮದ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ನಿಗಮ, ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಸೇರಿ ಹಲವರಿಗೆ ಎಸ್ಐಟಿಯಿಂದ ನೋಟಿಸ್ ಜಾರಿ ಮಾಡಿದ್ದು, ನಿಗದಿತ ದಿನಗಳಂದು ಕರೆಸಿ ವಿಚಾರಣೆ ನಡೆಸಲಾಗುತ್ತಿದೆ. ಹಗರಣದ ತನಿಖೆಗೆ ವೇಗ ನೀಡಿರುವ ಎಸ್ಐಟಿ ಸಚಿವರೊಬ್ಬರ ಆಪ್ತ ಎನ್ನಲಾಗಿರುವ ನಾಗರಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ ಎಂದು ಹೇಳಲಾಗಿದೆ.