ಬೆಂಗಳೂರು: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದ ಶಾಸಕರಾಗಿರುವ ಮಾಜಿ ಸಚಿವ ರೇವಣ್ಣ ಹೆಚ್.ಡಿ. ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದೆ.
ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ? ನೀವು ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲ ಎಂದು ರೇವಣ್ಣ ಪರ ವಕೀಲರಿಗೆ ಕೋರ್ಟ್ ಪ್ರಶ್ನಿಸಿದೆ.
ಜಾಮೀನು ನೀಡಬೇಕಾದ ಆರೋಪಗಳಿವೆ. ಆದರೆ, ಮ್ಯಾಜಿಸ್ಟ್ರೇಟ್ ಗೆ ಅತ್ಯಾಚಾರ ಆರೋಪ ಸೇರಿಸಲು ಅರ್ಜಿ ನೀಡಲಾಗಿದೆ. ಪೊಲೀಸರು ಅತ್ಯಾಚಾರ ಆರೋಪ ಸೇರ್ಪಡೆಗೆ ಕೋರಿದ್ದಾರೆ. ಎಸ್ಐಟಿ ಅರ್ಜಿ ಸಲ್ಲಿಕೆ ಮಾಹಿತಿ ಇರುವುದಾಗಿ ರೇವಣ್ಣ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಹಿರಿಯ ವಕೀಲ ಮೂರ್ತಿ ಡಿ. ನಾಯಕ್ ವಾದ ಮಂಡಿಸಿದ್ದಾರೆ. ಮಧ್ಯಂತರ ಜಾಮೀನು ನೀಡಲು ವಕೀಲರು ಮನವಿ ಮಾಡಿದ್ದು, ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ ನಾಳೆಗೆ ವಿಚಾರಣೆ ಮುಂದೂಡಲಾಗಿದೆ.