ಮಹತ್ವದ ಬೆಳವಣಿಗೆಯಲ್ಲಿ ಲೈಂಗಿಕ ಕಿರುಕಳ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್ ನೀಡಲಾಗಿದ್ದು, ಅವರು ನಿನ್ನೆ ಹಾಜರಾಗಬೇಕಿತ್ತು.
ಆದರೆ ಪ್ರಜ್ವಲ್ ರೇವಣ್ಣ ಲೋಕಸಭಾ ಚುನಾವಣೆ ಮುಗಿದ ದಿನವೇ ಜರ್ಮನಿಗೆ ತೆರಳಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಗೈರು ಹಾಜರಾಗಿದ್ದರಲ್ಲದೆ ಬುಧವಾರದಂದು ತಮ್ಮ ವಕೀಲರ ಮೂಲಕ ಎಸ್ಐಟಿಗೆ ಉತ್ತರಿಸಿ ವಿಚಾರಣೆಗೆ ಹಾಜರಾಗಲು ತಮಗೆ 7 ದಿನಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದರು.
ಇದರ ಮಧ್ಯೆ ಎಸ್ಐಟಿ, ಪ್ರಜ್ವಲ್ ರೇವಣ್ಣ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದು ಅವರು ಬಂದ ತಕ್ಷಣವೇ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದೆ. ಅಲ್ಲದೆ ಎಸ್ಐಟಿ ತಂಡ ತನಿಖೆಯನ್ನು ಚುರುಕುಗೊಳಿಸಿದ್ದು, ಸಂತ್ರಸ್ತೆಯರಿಂದ ಹೆಚ್ಚಿನ ಮಾಹಿತಿ ಪಡೆಯಲು ಮುಂದಾಗಿದೆ ಎನ್ನಲಾಗಿದೆ.