ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣರನ್ನು 1 ವಾರ ಅಂದರೆ ಜೂನ್ 6 ವರೆಗೆ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಂಗಳೂರಿನ 42 ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಾಧೀಶ ಕೆ ಎನ್ ಶಿವಕುಮಾರ್ ಅವರ ಮುಂದೆ ಪ್ರಜ್ವಲ್ ರೇವಣ್ಣರನ್ನು ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಆದೇಶ ಹೊರಡಿಸಿದ್ದಾರೆ.
ಎಸ್ ಐ ಟಿ ಪರ ವಾದ ಮಂಡಿಸಿದ ಎಸ್ ಪಿ ಪಿ ಅಶೋಕ್ ನಾಯಕ್ ‘ ಪ್ರಜ್ವಲ್ ಅತ್ಯಾಚಾರ ಪ್ರಕರಣ ಆರೋಪಿ, ಈತನನ್ನು ವಿಕೃತಿ ಕಾಮಿ ಎನ್ನಬಹುದು. ವಾಟ್ಸಾಪ್ ಕಾಲ್ ಮಾಡಿ ಮಹಿಳೆಯರಿಗೆ ಬಟ್ಟೆ ಬಿಚ್ಚುವಂತೆ ಹೇಳಿದ್ದಾನೆ ಎಂದು ಜಡ್ಜ್ ಮುಂದೆ ಹೇಳಿದರು. ನಂತರ ಜಡ್ಜ್ ಪ್ರಜ್ವಲ್ ಗೆ ನಿಮ್ಮ ಹೆಸರೇನು..? ಎಂದು ಪ್ರಶ್ನೆ ಕೇಳುತ್ತಾರೆ. ನನ್ನ ಹೆಸರು ಪ್ರಜ್ವಲ್ ಎಂದು ಪ್ರಜ್ವಲ್ ಜಡ್ಜ್ ಮುಂದೆ ಹೇಳುತ್ತಾರೆ.
14 ದಿನ ಕಸ್ಟಡಿಗೆ ನೀಡುವಂತೆ ಎಸ್ ಐ ಟಿ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ಪ್ರಜ್ವಲ್ ಪರ ವಕೀಲ ಅರುಣ್ ವಾದ ಮಂಡಿಸಿದ್ದು, ಒಂದು ದಿನ ಕಸ್ಟಡಿ ಸಾಕು ಎಂದು ಮನವಿ ಮಾಡಿಕೊಂಡಿದ್ದರು. ವಾದ ವಿವಾದ ಆಲಿಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ನಂತರ ವಿದೇಶದಿಂದ ಆಗಮಿಸಿದ್ದು, ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಬಂದಿಳಿದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿದೆ.ನಂತರ ಇಂದು ಪ್ರಜ್ವಲ್ ರೇವಣ್ಣರನ್ನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಎಸ್ ಐ ಟಿ ಈ ಪ್ರಕ್ರಿಯೆ ನಡೆಸಿದ ಬಳಿಕ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಿದೆ.