ಬೆಂಗಳೂರು: ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುನಿರತ್ನ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.
ಮೂರು ಪೋಲಿಸ್ ವಾಹನಗಳಲ್ಲಿ ಬಂದಿದ್ದ ಎಸ್ಐಟಿ ಅಧಿಕಾರಿಗಳ ತಂಡ ಬಾಡಿ ವಾರೆಂಟ್ ಮೇಲೆ ಮುನಿರತ್ನ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಅಕ್ಟೋಬರ್ 5ರವರೆಗೆ ನ್ಯಾಯಾಲಯ ಎಸ್ಐಟಿ ಕಸ್ಟಡಿಗೆ ಮುನಿರತ್ನ ಅವರನ್ನು ನೀಡಿ ಆದೇಶಿಸಿತ್ತು. ಮುನಿರತ್ನ ಅವರನ್ನು ಎಸ್ಐಟಿ ಕಚೇರಿಯಲ್ಲಿ ವಿಚಾರಣೆಗೊಳಪಡಿಸಲಾಗುವುದು.