ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದೆ.
ಈ ಹಿನ್ನೆಲೆಯಲ್ಲಿ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿದ್ದು, ಆದರೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವ ಕಾರಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇಲ್ಲ.
ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಭಾರತಕ್ಕೆ ಕರೆತಂದು ವಿಚಾರಣೆ ನಡೆಸಲು ವಿಶೇಷ ತನಿಖಾ ತಂಡ ನಿರ್ಧರಿಸಿದೆ ಎನ್ನಲಾಗಿದ್ದು, ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ.
ಇದರ ಮಧ್ಯೆ ಸಂತ್ರಸ್ತೆಯರ ವಿಚಾರಣೆಗೆ ಮಹಿಳಾ ಅಧಿಕಾರಿಯನ್ನು ನಿಯೋಜಿಸಲಾಗಿದ್ದು, ವಿಡಿಯೋದಲ್ಲಿರುವವರನ್ನು ಗುರುತಿಸಿ ಬಳಿಕ ಅವರಿಂದ ಮಾಹಿತಿ ಕಲೆ ಹಾಕಲಾಗುತ್ತದೆ ಎನ್ನಲಾಗಿದೆ.