
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಕಾರ್ ಚಾಲಕನಿಗೆ ಎಸ್ಐಟಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಸಂತ್ರಸ್ತೆಯನ್ನು ಚಾಲಕ ಅಜಿತ್ ಕಾರ್ ನಲ್ಲಿ ಕರೆದುಕೊಂಡು ಹೋಗಿದ್ದ ಆರೋಪ ಕೇಳಿ ಬಂದಿತ್ತು. ಸಂತ್ರಸ್ತೆ ಅಪಹರಣ ಪ್ರಕರಣ ಸಂಬಂಧ ಎಸ್ಐಟಿಯಿಂದ ಈಗಾಗಲೇ ಅಜಿತ್ ಗೆ ಎರಡು ಬಾರಿ ಸಮನ್ಸ್ ನೀಡಲಾಗಿದೆ.
ಅಪಹರಣ ಪ್ರಕರಣ ದಾಖಲಾದ ನಂತರ ಅಜಿತ್ ತಲೆಮರೆಸಿಕೊಂಡಿದ್ದಾನೆ. ಪತಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್ ವಿರುದ್ಧದ ಪ್ರಕರಣದಲ್ಲಿ ಭವಾನಿ ರೇವಣ್ಣ ಹೆಸರು ಕೂಡ ಉಲ್ಲೇಖಿಸಲಾಗಿದೆ. ಭವಾನಿ ರೇವಣ್ಣ ಕರೆದರು ಎಂದು ಹೇಳಿ ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ ಆರೋಪ ಕೇಳಿ ಬಂದಿದೆ. ಒಂದು ವೇಳೆ ತನಿಖೆ ಸಂದರ್ಭದಲ್ಲಿ ಸಾಕ್ಷ್ಯ ದೊರೆತಲ್ಲಿ ಭವಾನಿ ರೇವಣ್ಣ ಅವರಿಗೆ ಸಂಕಷ್ಟ ತಪ್ಪಿದ್ದಲ್ಲ ಎಂದು ಹೇಳಲಾಗಿದೆ.