
ಚೆನ್ನೈ: ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ತಗಲಿ ಆರು ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ನಡೆದಿದೆ.
ವಿರುಧ್ ನಗರ ಜಿಲ್ಲೆಯಲ್ಲಿರುವ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.