alex Certify ಕಾರ್ –ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ –ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಭೋಪಾಲ್: ಮಧ್ಯಪ್ರದೇಶದ ಸಾಗರ್ ನಗರದ ಬಳಿ ಟ್ರಕ್‌ ಗೆ ಎಸ್‌ಯುವಿ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಗಾಯಗೊಂಡಿದ್ದಾರೆ.

ಉಪವಿಭಾಗೀಯ ಪೊಲೀಸ್ ಅಧಿಕಾರಿ(SDOP) ಅಶೋಕ ಚೌರಾಸಿಯಾ ಪ್ರಕಾರ, ಜಿಲ್ಲಾ ಕೇಂದ್ರದಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ ಸನೋಧಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾಗರ್-ಜಬಲ್‌ಪುರ ರಸ್ತೆಯ ಬಮೋರಿ ದೂದರ್ ಬಳಿ ಭಾನುವಾರ ಸಂಜೆ ಈ ಘಟನೆ ನಡೆದಿದೆ.

ಎಸ್‌ಯುವಿಯಲ್ಲಿದ್ದ 7 ಜನರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...