alex Certify ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 6 ಜನ ಸಾವು, 11 ಮಂದಿ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 6 ಜನ ಸಾವು, 11 ಮಂದಿ ಗಾಯ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದಾರೆ. 11 ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ರಾಜಸ್ಥಾನದ ದೌಸಾದ ಮಂದಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರಕ್ ಪ್ರಯಾಣಿಕರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 9 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂದಾವರ್ ಪಿಎಸ್ ವ್ಯಾಪ್ತಿಯ ಉಕ್ರುಂಡ್ ಗ್ರಾಮದ ಬಳಿ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಅವರನ್ನು ಜೈಪುರ ಆಸ್ಪತ್ರೆಗೆ, ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎಸ್ಪಿ ಬಜರಂಗ್ ಸಿಂಗ್ ಶೇಖಾವತ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...